ಬೆಂಗಳೂರು: ರಾಜ್ಯದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಶುರುವಾಗಿದ್ದು, ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಸರ್ಕಾರ ಸಮಯ ನಿಗದಿ ಮಾಡಿದೆ.
ಅಕ್ಟೋಬರ್ 24 ರಿಂದ 26ರ ವರೆಗೆ ದೀಪಾವಳಿ ಸೆಲೆಬ್ರೇಷನ್ ನಡೆಯಲಿದೆ. ದಿನಕ್ಕೆ ಎರಡು ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ರಾತ್ರಿ 8 ಗಂಟೆಯಿಂದ 10 ಗಂಟೆಯ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಎಲ್ಲರೂ ಕೂಡ ಸುಪ್ರೀಂಕೋರ್ಟ್ ನಿಯಮಾವಳಿಗಳನ್ನ ಪಾಲಿಸಬೇಕು. ಪಟಾಕಿ ಮಾರುವವರು ತ್ಯಾಜ್ಯ ವಿಲೇವಾರಿ ಜವಾಬ್ದಾರಿಯನ್ನೂ ಹೊರಬೇಕು. 125 ಡೆಸಿಬಿಲ್ಗಿಂತ ಕಡಿಮೆ ಇರುವ ಪಟಾಕಿಗಳನ್ನು ಮಾತ್ರ ಸಿಡಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ.


























