ಪುಂಜಾಲಕಟ್ಟೆ: ಶ್ರೀ ರಾಮ ನಗರ ಪ್ರಗತಿ ಹಾರ್ಡ್‌ವೇರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಪಿಕಪ್ ಚಾಲಕ ಮದ್ದಡ್ಕದ ರಾಘವೇಂದ್ರ ಅವರು ಗಾಯಗೊಂಡಿದ್ದು, ಬಂಟ್ವಾಳದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಜಿರೆಯಿಂದ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಹಾಗೂ ಪುಂಜಾಲಕಟ್ಟೆ ಕಡೆಗೆ ಹೋಗುತ್ತಿದ್ದ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ.


























