ಪುತ್ತೂರು: ವೃದ್ದೆಯೋರ್ವರು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಪುತ್ತೂರು-ದರ್ಬೆ ರಸ್ತೆಯ ಎಳ್ಮುಡಿಯಲ್ಲಿ ನಡೆದಿದೆ.

ಕಾರು ಬರುತ್ತಿದ್ದ ವೇಳೆ ವೃದ್ದೆಯೋರ್ವರು ಹಠಾತ್ ರಸ್ತೆ ದಾಟಿದ್ದು, ಈ ವೇಳೆ ಗಾಯಗೊಂಡಿದ್ದಾರೆನ್ನಲಾಗಿದೆ. ಘಟನೆ ವೇಳೆ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಹಿನ್ನೆಲೆ ಹಿಂಬದಿಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಕಾರಿಗೆ ಡಿಕ್ಕಿ ಹೊಡೆದಿದ್ದು, ದ್ವಿಚಕ್ರವಾಹನದ ಮುಂಭಾಗಕ್ಕೆ ಸ್ವಲ್ಪ ಹಾನಿ ಉಂಟಾಗಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ವೃದ್ದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಂದಿದೆ.

























