ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯ ಕಾರ್ಯಕ್ಷೇತ್ರ ವ್ಯಾಪ್ತಿಯ ಗೋಳ್ತಮಜಲು ಸಿ ಒಕ್ಕೂ ಟದಿಂದ ವೀರಕಂಭ ಗ್ರಾಮದ ಬಾಯಿಲ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಗೋಳಿಮಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಿ, ಶಾಲಾ ಮುಖ್ಯ ಶಿಕ್ಷಕಿ ವಾರಿಜಾಕ್ಷಿ, ಸಹ ಶಿಕ್ಷಕಿ ಜೆಸಿಂತ ವೀರಕಂಭ ಒಕ್ಕೂಟದ ಸೇವಾಪ್ರತಿನಿಧಿ ರೇವತಿ,ಗೊಳ್ತಾಮಜಲು ಸಿ ಒಕ್ಕೂಟದ ಸೇವಾಪ್ರತಿನಿಧಿ ತನುಜಾ, ಯೋಜನೆಯ ಒಕ್ಕೂಟದ ಸದಸ್ಯರುಗಳು,ಶಾಲಾ ಮಕ್ಕಳು, ಉಪಸ್ಥಿತರಿದ್ದರು.





























