ವಿಟ್ಲ: ಲಾರಿಯೊಂದು ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ವಿಟ್ಲದ ಕಾಶೀಮಠದಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಮೈರ ನಿವಾಸಿ ಪ್ರಭಾಕರ್ ಎಂದು ಗುರುತಿಸಲಾಗಿದೆ.

ಮೈರ ನಿವಾಸಿ ಪ್ರಭಾಕರ್ ರವರು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಅಪಘಾತದಿಂದಾಗಿ ಪ್ರಭಾಕರ್ ರವರ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ..




























