ಮಂಗಳೂರು: ಪತಿರಾಯನೋರ್ವ ಅತಿಯಾದ ಸಂಶಯಪಟ್ಟು ಪತ್ನಿಯನ್ನು ಕೊಲೆ ಮಾಡಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉಳ್ಳಾಲದ ಪಿಲಾರು ಎಂಬಲ್ಲಿ ನಡೆದಿದೆ.

ಶೋಭಾ ಪೂಜಾರಿ (45) ಕೊಲೆಯಾದ ಮಹಿಳೆ. ಶಿವಾನಂದ ಪೂಜಾರಿ (55) ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ.
ಮೃತ ಇಬ್ಬರು ಪಿಲಾರು ನಿವಾಸಿಗಳಾಗಿದ್ದಾರೆ. ಇನ್ನು ಪತಿ, ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ. ಹೀಗಾಗಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಪಕ್ಕದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಶಿವಾನಂದ ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..


























