ಪುತ್ತೂರು: ಕಾಣಿಯೂರಿನಲ್ಲಿ ನಡೆದ ಮಾರಣಾಂತಿಕ ಗುಂಪು ಹಲ್ಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಾಪಾರಿಗಳನ್ನು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ ದ ಕ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ರವರು ಮಾತನಾಡಿ, ಈ ಹಲ್ಲೆ ಒಂದು ಅಮಾನವೀಯ ಕೃತ್ಯ, ಇಡೀ ನಾಗರೀಕ ಸಮಾಜ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಬೇಕಾಗಿದೆ ಎಂದು ಹೇಳಿದರು.

ಕಳೆದ ಹಲವು ದಿನಗಳಿಂದ ದೆಹಲಿಯಲ್ಲಿದ್ದ ಹರೀಶ್ ಕುಮಾರ್ ರವರು ದೆಹಲಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಬೆಡ್ ಶೀಟ್ ವಾಪಾರಿಗಳನ್ನು ಭೇಟಿಯಾಗಿ ಸಾಂತ್ವಾನ ಹೇಳಿ, ಚುನಾವಣೆ ಬರುತ್ತಿರುವ ಸಂದರ್ಭದಲ್ಲಿ ಕೆಲವು ಸಂಘಟನೆಗಳು ಕಾನೂನನ್ನು ಕೈಗೆತ್ತಿಕೊಂಡು ಜಿಲ್ಲೆಯ ಶಾಂತಿ,ಸಾಮರಸ್ಯವನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ರಾಜ್ಯದ ಬಿಜೆಪಿ ಸರಕಾರ ಕುಮ್ಮಕ್ಕು ನೀಡುತ್ತಿದೆ ಎಂದರು.

ಜಿಲ್ಲೆಯ ಬಿಜೆಪಿಗರು ಅಲ್ಲಲ್ಲಿ ಗಲಭೆಗಳನ್ನು ಎಬ್ಬಿಸಿ, ಜಿಲ್ಲೆಯ ಜನರ ಶಾಂತಿ ನೆಮ್ಮದಿಯನ್ನು ಹಾಳು ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಹರೀಶ್ ಕುಮಾರ್ ರವರು ಆರೋಪಿಸಿದರು.


























