ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ- ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದೆ.
022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ 2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರಿಗೆ ಮತ್ತು ಜಿಲ್ಲೆಯ ಒಂದು ಸಂಘ ಸಂಸ್ಥೆಗೆ ಈ ಪ್ರಶಸ್ತಿ ಒಲಿದು ಬಂದಿದೆ.
ಸಮಾಜಸೇವಾ ಕ್ಷೇತ್ರದಲ್ಲಿ ಉದ್ಯಮಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ರವಿ ಶೆಟ್ಟಿ ಮೂಡಂಬೈಲು ನೇಸರ ಕಂಪ ರವರು ಭಾಜನರಾಗಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ನಾರಾಯಣ ಎಂ ರವರು ಭಾಜನರಾಗಿದ್ದು, ನೃತ್ಯ ಕ್ಷೇತ್ರದಲ್ಲಿ ಕಮಲಾಕ್ಷಚಾರ್ಯ ರವರು ಭಾಜನರಾಗಿದ್ದು, ಯಕ್ಷಗಾನ ಕ್ಷೇತ್ರದಲ್ಲಿ ಸರಪಾಡಿ ಅಶೋಕ್ ಶೆಟ್ಟಿ ರವರು ಭಾಜನರಾಗಿದ್ದಾರೆ.
ಸಂಘ-ಸಂಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವವಾಹಿನಿ ಸಂಸ್ಥೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯನ್ನು ಒಳಗೊಂಡು ಜಿಲ್ಲೆ ಯ ಎಲ್ಲಾ ತಾಲೂಕುಗಳಲ್ಲಿ ವಿವಿಧ ಘಟಕಗಳನ್ನು ಹೊಂದಿ ಸಮಾಜ ಮುಖಿ ಸೇವಾ ಚಟುವಟಿಕೆಗಳನ್ನು ಮಾಡುತ್ತಿರುವ ಯುವವಾಹಿನಿ ಸಂಸ್ಥೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾಗಿದೆ.


























