ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್. ಅನಿಲ್ ಕುಮಾರ್ ಸೇರಿದಂತೆ ಅನೇಕ ನಾಯಕರು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಂಡು ಪಕ್ಷಕ್ಕೆ ಸ್ವಾಗತಿಸಿದರು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿಗಳು, ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಎಸ್.ಟಿ ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಸಿ.ಪಿ ಯೋಗೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾಧ್ಯಕ್ಷರಾದ ಶ್ರೀ @nalinkateel & ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ಸಮ್ಮುಖದಲ್ಲಿ ಮಾಜಿ ಸಂಸದ ಶ್ರೀ ಮುದ್ದಹನುಮೇಗೌಡ, ಚಲನಚಿತ್ರ ನಟರು ಹಾಗೂ ಮಾಜಿ ಸಂಸದ ಶ್ರೀ ಶಶಿಕುಮಾರ್, ಮಾಜಿ ಐಎಎಸ್ ಅಧಿಕಾರಿ ಶ್ರೀ ಬಿ. ಎಚ್. ಅನಿಲ್ ಕುಮಾರ್, ಸೇವಾದಳದ ರಾಜ್ಯ ಉಪಾಧ್ಯಕ್ಷ ಶ್ರೀ ಹನುಮಂತರಾವ್ ಜವಳಿ, (1/2)#JoinBJP pic.twitter.com/TJkFdSf7t9
— BJP Karnataka (@BJP4Karnataka) November 3, 2022




























