ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕಯೋರ್ವನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಕುಳಾಲು ನಿವಾಸಿ ಸಂಶೀರ್ ಎಂಬಾತ ಬಂಧಿತ ಆರೋಪಿ.
ಆರೋಪಿ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಅಪ್ರಾಪ್ತ
ಬಾಲಕಿಯನ್ನು ಪ್ರೀತಿಸುವ ನೆಪ ಮಾಡಿ ಬಳಿಕ ಮನೆಗೆ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕ ಮಾಡಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆ ಬಂದಿರುವ ದೂರಿನಂತೆ ಈತನನ್ನು ವಿಟ್ಲ ಪೋಲಿಸ್ ಇನ್ಸ್ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ, ಎಸ್ಐ ಸಂದೀಪ್ ಶೆಟ್ಟಿ ಅವರ ತಂಡ ಆರೋಪಿಯನ್ನು ಬಂಧಿಸಿದೆ.