ಮಂಡ್ಯ: ಲಾರಿಗೆ ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಗೊಂದಿಹಳ್ಳಿ ಗೇಟ್ ಬಳಿ ನಡೆದಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ.
ಅಕ್ಷಯ್ ಮೃತ ಪ್ರಯಾಣಿಕ. ಮಧ್ಯರಾತ್ರಿ ಅಪಘಾತ ಸಂಭವಿಸಿದ್ದು, ದಕ್ಷಿಣ ಕನ್ನಡ ಮೂಲದವರು ಬಸ್ಸಿನಲ್ಲಿದ್ದರು ಎನ್ನಲಾಗಿದೆ.
ಬಸ್ ಬೆಂಗಳೂರಿನಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿತ್ತು. ಈ ವೇಳೆ ಲಾರಿಗೆ ಬಸ್ ಹಿಂದಿನಿಂದ ಬಂದು ಗುದ್ದಿದೆ. ಗಾಯಗೊಂಡವರನ್ನ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


























