ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು. ಭೂತಾರಾಧನೆ ಸಮಯದಲ್ಲಿ ದೈವ ಬರೋದು ಸತ್ಯ ಅಲ್ಲವೇ ಅಲ್ಲ ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ, ಶಾಸಕ ಯುಟಿ ಖಾದರ್ ರವರು ತಿರುಗೇಟು ನೀಡಿದ್ದಾರೆ.
‘ಬಿ.ಟಿ. ಲಲಿತಾ ನಾಯಕ್ ಅವರೇ, ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೇ ದೈವ ನರ್ತಕರಿಗೆ ನೀಡಿರುವ ಮಾಸಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ಧವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ’ ಎಂದಿದ್ದಾರೆ.
‘ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು’.., ಎಂದು ಖಾದರ್ ರವರು ಟ್ವೀಟರ್ ಮೂಲಕ ಬಿ.ಟಿ.ಲಲಿತಾ ನಾಯ್ಕ್ ರವರಿಗೆ ತಿರುಗೇಟು ನೀಡಿದ್ದಾರೆ.
ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. (1)
— UT Khadér (@utkhader) November 5, 2022
ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು.(2)
— UT Khadér (@utkhader) November 5, 2022

























