ಪುತ್ತೂರು: ತಾಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೈದ ಮಹಿಳೆಯನ್ನು ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) ಎಂದು ಗುರುತಿಸಲಾಗಿದೆ.
ವೈಶಾಲಿ ಅವರ ವಿವಾಹ ಜಯಪ್ರಕಾಶ್ ಅವರ ಜೊತೆ 7 ತಿಂಗಳ ಹಿಂದೆಷ್ಟೇ ನಡೆದಿದ್ದು, ವೈಶಾಲಿ ಅವರು ಶನಿವಾರ ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರ ತಾಯಿ ನೀಡಿದ ದೂರಿನಂತೆ ಸಂಪ್ಯ ಠಾಣೆಯ ಪೊಲೀಸರು ಪ್ರಕರಣ ದಾಖಿಲಿಸಿಕೊಂಡಿದ್ದಾರೆ.




























