ಸುಳ್ಯ: ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಬೈಕ್ ಸವಾರನನ್ನು ಬೆಳ್ಳಾರೆ ನೆಟ್ಟಾರು ಬೊಳಿಯ ಮೂಲೆ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ.
ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ..



























