ಮಂಗಳೂರು: ಗೋವು ಹತ್ಯೆ ನಿಷೇಧ ಆದೇಶದ ನಡುವೆಯೇ ಮಂಗಳೂರು ಮಹಾನಗರ ಪಾಲಿಕೆಯ ಸ್ಮಾರ್ಟ್ ಸಿಟಿ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ಮಾರ್ಕೆಟ್ ನಲ್ಲಿ 9 ಬೀಪ್ ಸ್ಟಾಲ್ ಗಳಿಗೆ ಅವಕಾಶ ನೀಡಿರುವುದರ ವಿರುದ್ದ ನ.8 ರಂದು ಹಿಂದೂ ಜಾಗರಣ ವೇದಿಕೆ ಮಂಗಳೂರು ಮಹಾನಗರದ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.
ನ.8 ರಂದು ಬೆಳಿಗ್ಗೆ 10 ಗಂಟೆಯಿಂದ ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಟಣೆ ತಿಳಿಸಿದೆ.

























