ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ, ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.
ಕೇರಳ – ಕರ್ನಾಟಕ ಗಡಿಭಾಗ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಲೋಕಾಯುಕ್ತ ದಾಳಿ ನಡೆಸಿದೆ. ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದಾಗಿ ತಿಳಿದು ಬಂದಿದೆ.
ಸಂಜೆ 7 ಗಂಟೆಗೆ ತಂಡ ದಾಳಿ ನಡೆಸಿ ರಾತ್ರಿ 11 ರ ವರೆಗೆ ಚೆಕ್ ಪೋಸ್ಟ್ ಒಳಗಡೆ ದಾಖಲೆಗಳನ್ನು ಪರಿಶೀಲಿಸಿದೆ ಎಂದು ತಿಳಿದು ಬಂದಿದೆ.


























