ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗತ್ತಿದ್ದು, ಜನರು ನಿಯಮ ಪಾಲಿಸದಿದ್ದರೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಬೀದರ್ ನಲ್ಲಿ ಮಾತನಾಡಿದ ಅವರು, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೋನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಸಿಎಂ ಬಿಎಸ್’ ವೈ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.