ನವದೆಹಲಿ: ಯುಗಾದಿ ಹಬ್ಬದ ಸಂಭ್ರಮಕ್ಕೆ ಪ್ರಧಾನಿ ಮೋದಿ ಶುಭಾಶಯವನ್ನು ತಿಳಿಸಿದ್ದಾರೆ. ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದು ಮೋದಿ ಟ್ವೀಟ್ ಮಾಡುವ ಮೂಲಕವಾಗಿ ಶುಭಾಶಯ ತಿಳಿಸಿದ್ದಾರೆ. ಕನ್ನಡಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕವಾಗಿ ದೇಶದ ಜನರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಮೋದಿ ತಿಳಿಸಿದ್ದಾರೆ.
ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.
— Narendra Modi (@narendramodi) April 13, 2021