ಉಪ್ಪಿನಂಗಡಿ : ಅಕ್ರಮವಾಗಿ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿದ್ದ ಮರಳು ತುಂಬಿದ ಲಾರಿಯನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಶಿರಾಡಿ ಗ್ರಾಮದ ಗುಂಡ್ಯ ತಪಾಸಣಾ ಕೇಂದ್ರದ ಬಳಿ ಯಾವುದೇ ದಾಖಲೆ ಪತ್ರಗಳಿಲ್ಲದೆ ಸಾಗಾಟ ಮಾಡಲಾಗುತ್ತಿದ್ದ ಮರಳು ತುಂಬಿದ ಲಾರಿಯನ್ನು ವಶಕ್ಕೆ ತೆಗೆದುಕೊಂಡು ದಾಖಲೆ ಪತ್ರಗಳನ್ನು ಸಲ್ಲಿಸಲು ಸೂಚಿಸಿದರು. ಆದರೆ ಲಾರಿ ಚಾಲಕ ಯಾವುದೇ ದಾಖಲೆ ಪತ್ರಗಳನ್ನು ಸಲ್ಲಿಸಲು ವಿಫಲನಾದ ಹಿನ್ನಲೆಯಲ್ಲಿ ವಶಪಡಿಸಿಕೊಂಡ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಯಿತೆಂದು ಪೊಲೀಸರು ತಿಳಿಸಿದ್ದಾರೆ.