ನವದೆಹಲಿ: ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಸೇರಿದಂತೆ 6 ಮಂದಿಯನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶಿಸಿದೆ.
ಈ ಹಿಂದೆ ತಮಿಳುನಾಡು ಸರ್ಕಾರ ದೋಷಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು ಎಂಬ ವಿಚಾರವನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದ ವೇಳೆ ಗಮನಿಸಿದೆ. ಮೇ ತಿಂಗಳಲ್ಲಿ ಮತ್ತೊಬ್ಬ ದೋಷಿ ಪೆರಾರಿವಾಲನ್‌ನನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು.
ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ತಮಿಳು ಟೈಗರ್ಸ್ ಎಲ್‌ಟಿಟಿಇ ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು. ಈ ಪ್ರಕರಣದಲ್ಲಿ ನಳಿನಿ ಅಲ್ಲದೆ ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಹಾಗೂ ರವಿಚಂದ್ರನ್ ಜೈಲು ಪಾಲಾಗಿದ್ದರು.



























