ಮಂಗಳೂರು: ತಮಿಳಿನ ಖ್ಯಾತ ನಟ ವಿಶಾಲ್ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ. ನಿನ್ನೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟು ವಿಶೇಷ ಸೇವೆ ಸಲ್ಲಿಸಿದ್ದರು.

ಶನಿವಾರ ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ನಟ ವಿಶಾಲ್, ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ. ಸ್ನೇಹಿತರ ಜೊತೆ ಆಗಮಿಸಿದ ವಿಶಾಲ್ ದೇವರ ದರ್ಶನ ಪಡೆದು ಪೂಜೆ ನೆರವೇರಿಸಿದ್ದಾರೆ.
ಧರ್ಮಸ್ಥಳ ಹಾಗೂ ಕುಕ್ಕೆಯಲ್ಲಿ ನೆಚ್ಚಿನ ನಟನನ್ನು ನೋಡಿದ ಫ್ಯಾನ್ಸ್ ಸೆಲ್ಪಿಗಾಗಿ ಮುಗಿಬಿದ್ದಿದ್ದಾರೆ.

























