ಪುತ್ತೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದಾಗಿ ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ನಡೆದಿದೆ.
ಪುತ್ತೂರು ವಿಕ್ಟರ್ಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ, ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಹಾಗೂ ಚೇತನಾ ದಂಪತಿಗಳ ಪುತ್ರಿ ಹಿಮಾನಿ ಮೃತ ಬಾಲಕಿ.

ಹಿಮಾನಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನಲೆ ಖಾಸಗಿ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೇ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ತಂದೆ,ತಾಯಿ, ಸಹೋದರ, ಅಜ್ಜಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.


























