ಪುತ್ತೂರು: ಮಗು ಹುಟ್ಟಿದಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತು ಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ ಮಗುವಿಗೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನದ ಚಂದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್‌ಅಂತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ಕನಸುಗಳು-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹುಟ್ಟಿನಿಂದಲೇ ನಾವು ಬುದ್ದಿವಂತರು. ಆದರೆ ನಾವು ಬೆಳೆಯುವ ಪರಿಸರದಆಧಾರದ ಮೇಲೆ ನಮ್ಮಗುಣ, ನಡತೆ ಮತ್ತು ವರ್ತನೆ ಬದಲಾವಣೆಯಾಗುತ್ತದೆ. ಜಂಕ್ ಫುಡ್ ಗಳನ್ನು ತ್ಯಜಿಸಿ, ಆರೋಗ್ಯಕ್ಕೆ ಹಿತಕರವಾದ ಆಹಾರವನ್ನು ಸೇವಿಸಬೇಕು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಇನ್ನಿತರ ಚಟುವಟಿಕೆಯನ್ನು ರೂಢಿಸಿಕೊಳ್ಳಬೇಕು. ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು. ವಿದ್ಯಾರ್ಜನೆ ವಿದ್ಯಾರ್ಥಿಯ ಬದುಕಿನ ಏಕೈಕ ನಿರ್ಧಾರವಾಗಬೇಕೆಂದು ಎಂದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‌ರೈ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಭಾಗ್ಯಶ್ರೀ ನಿರೂಪಿಸಿದರು.



























