ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ದರ್ಬೆ ಬೈಪಾಸ್ ಬಳಿ ನಡೆದಿದೆ.
ಘಟನೆಯಿಂದಾಗಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಆರ್ಯಾಪು ಸಂಪ್ಯ ನಿವಾಸಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಬಿಲ್ಡಿಂಗ್ ನಲ್ಲಿರುವ ಡ್ರೆಸ್ ಮಳಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಷಧ್ (20) ಮೃತ ಯುವಕ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ..


























