ಪುತ್ತೂರು: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾದ ಘಟನೆ ನ.13 ರಂದು ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ನಡೆದಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
ವ್ಯಕ್ತಿಯೋರ್ವರು ಮೃತಪಟ್ಟು ಹಲವು ದಿನಗಳು ಕಳೆದಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..


























