ಪುತ್ತೂರು: ಕೇಂದ್ರ ಸರ್ಕಾರದ ಮಹತ್ವದ ಜಲ್ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಬಲ್ನಾಡು ಗ್ರಾಮಕ್ಕೆ ರೂ.19ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾದ ಕಾಮಗಾರಿಗಳಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ರವರು ಇದರ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ದಿವ್ಯ ಪುರುಷೋತ್ತಮ ಮುಂಗ್ಲಿಮನೆ,ಮುರುಳಿಕೃಷ್ಣ ಹಸಂತಡ್ಕ, ಬಿಜೆಪಿ ಪ್ರಮುಖರಾದ ಚನಿಲ ತಿಮ್ಮಪ್ಪ ಶೆಟ್ಟಿ, ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರುಗಳು, ಬಿಜೆಪಿ ಗಣ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.