ಮಾಣಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಮಾಣಿ, ಉಪಾಧ್ಯಕ್ಷೆ ಪುಷ್ಪಲತಾ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಿಕ್ಷಕ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


























