ಉಡುಪಿ: ಆಜಾನ್ ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ ಘಟನೆ ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ನಡೆದಿದ್ದು, ಈ ಘಟನೆಯನ್ನು ವಿರೋಧಿಸಿ ನಾಳೆ (ನ.17) ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ, ಶಂಕರನಾರಾಯಣ ಘಟಕ ವತಿಯಿಂದ ಪ್ರತಿಭಟನೆ ನಡೆಯಲಿದೆ.
ನ.17 ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ಪದವಿಪೂರ್ವ ಕಾಲೇಜು ವಠಾರ ಶಂಕರನಾರಾಯಣದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಟಣೆ ತಿಳಿಸಿದೆ.



























