ಪುತ್ತೂರು, ನ ೧೭: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ
ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ (ಪುತ್ತೂರಿನ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ), ಮನ್ನಿತ್ ಎನ್ ಗೌಡ (ಬನ್ನೂರಿನ
ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ಮತ್ತು ಸಾಗರಿ(ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ) ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು
ಪ್ರತಿನಿಧಿಸುತ್ತಿದ್ದಾರೆ.