ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಸೀತಾ ಕಲ್ಲಡ್ಕ ರವರಿಗೆ ನೀರಿನ ಹಾಸಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ರಾಜೇಶ್, ಗ್ರಾಮ ಅಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಶೆಟ್ಟಿ, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ, ಸೇವಾಪ್ರತಿನಿಧಿ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.


























