ಬೀದರ್: ಕೊರೊನಾ ಪರಿಸ್ಥಿತಿ ಹಾಗೂ ಲಾಕ್‌ಡೌನ್ ಹೇರುವ ಬಗ್ಗೆ ಚರ್ಚೆ ನಡೆಸಲುಏ. 18ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬಸವ ಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೊರೊನಾದ ಎರಡನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯದ ಜನತೆ ಸರ್ಕಾರದೊಂದಿಗೆ ಸಹಕರಿಸಬೇಕು” ಎಂದು ಸಿಎಂ ಬಿಎಸ್‌ವೈ ಅವರು ಮನವಿ ಮಾಡಿಕೊಂಡಿದ್ದಾರೆ.
“ಕೊರೊನಾದ ಎರಡನೇ ಅಲೆಯ ಹಿನ್ನೆಲೆ ಕೊರೊನಾ ಪ್ರಕರಣಗಳು ಮೇ 2ರ ವೇಳೆಗೆ ಹೆಚ್ಚಾಗಬಹುದು ಎಂದು ತಜ್ಞರ ಸಮಿತಿ ವರದಿ ನೀಡಿದೆ. ಆದರೆ, ಸದ್ಯ ರಾಜ್ಯದಲ್ಲಿ ಲಾಕ್‌ಡೌನ್ ಹೇರುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದ್ದಾರೆ.