ಬೆಂಗಳೂರು: ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ನಟೋರಿಯಸ್ ಕ್ರಿಮಿನಲ್ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಮಾಡಿ ಸಿಕ್ಕಿ ಬಿದ್ದಿದ್ದಾನೆ.
ಹೌದು. ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ ಆಧಾರ್ ವಿಳಾಸ ನೀಡಿದ್ದ ಬೆನ್ನಲ್ಲೇ ಆತ ಯಾರು.!!?? ಆತನ ಮೂಲ ಯಾವುದು ಎನ್ನುವುದರ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆತ ಯಾರು ಎಂಬುದನ್ನು ಪತ್ತೆ ಹಚ್ಚಿದ್ದಾರೆ.

ತುಂಗಾ ನದಿಯ ತಟದಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್(21) ಮತ್ತು ಮಂಗಳೂರಿನ ಮಾಜ್ ಮುನೀರ್ನನ್ನು(22) ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಎ1 ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್ ನಾಪತ್ತೆಯಾಗಿದ್ದ. ನಾಪತ್ತೆಯಾಗಿದ್ದ ಈತನ ಬಂಧನಕ್ಕೆ ಪೊಲೀಸರು ಸಾಕಷ್ಟು ಬಲೆ ಬೀಸಿದ್ದರೂ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಈಗ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಮಾಡಿ ಸಿಕ್ಕಿಬಿದ್ದಿದ್ದಾನೆ.
ಆಟೋದಲ್ಲಿ ಕುಕ್ಕರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಶಾರೀಕ್ಗೆ ಈಗ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ..
























