ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದ್ದು, ಈ ಘಟನೆ ನಮಗೆ ಸವಾಲೆಸದಂತಾಗಿದೆ., ಈ ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಈ ಉಗ್ರ ಕೃತ್ಯವನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ
ಮತ್ತು ಈ ಕೃತ್ಯದಲ್ಲಿ ಸ್ಥಳೀಯರ ಕೈವಾಡವಿರದೆ ಈ ಘಟನೆ ನಡೆಯಲು ಸಾಧ್ಯವಿಲ್ಲ., ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಾಂಬ್ ಟ್ರಯಲ್ ಬ್ಲಾಸ್ಟ್ ನಡೆದಿದ್ದು, ಆದ್ದರಿಂದ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಿ ಈ ಕೃತ್ಯದ ಹಿಂದೆ ಕೈ ಜೋಡಿಸಿದವರನ್ನು ಶೀಘ್ರವಾಗಿ ಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ..
























