ವಿಟ್ಲ: ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಸುರಿಬೈಲು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ಬಲ ಬದಿಗೆ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಸಂತೋಷ್ ಹಾಗೂ ರಂಜಿತ್ ರವರು ಚಲಾಯಿಸಿಕೊಂಡು ಬರುತ್ತಿದ್ದ ಸ್ಕೂಟರ್‌ಗೆ ಕೊಳ್ನಾಡು ಗ್ರಾಮದ ಸುರಿಬೈಲು ತಿರುವಿನಲ್ಲಿ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಸ್ಕೂಟರ್ ನಲ್ಲಿ ಬರುತ್ತಿದ್ದ ಸವಾರ ಸಂತೋಷ್ ಹಾಗೂ ಸಹ ಸವಾರ ರಂಜಿತ್ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ವತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ವತ್ರೆಗೆ ದಾಖಲಿಸಲಾಗಿದ್ದು, ಗಾಯಾಳು ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.