ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,ಅಂಬೇಡ್ಕರ್ ಆಪತ್ಭಾಂಧವ ಟ್ರಸ್ಟ್ ಮತ್ತು ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ಇದರ ಜಂಟಿ ಆಶ್ರಯದಲ್ಲಿ ಡಾ! ಬಿ ಆರ್ ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠಂದೂರುರವರು ಭಾಗವಹಿಸಿದರು.
ಸರಕಾರವು ಪ್ರತಿ ಯೋಜನೆಯಲ್ಲಿಯೂ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರು ಬರೆದ ಸಂವಿಧಾನದಲ್ಲಿ ಶೋಷಿತ ವರ್ಗಕ್ಕೆ ವಿಶೇಷ ಸ್ಥಾನಮಾನವನ್ನು ಕಲ್ಪಿಸಿದ್ದಾರೆ, ಅದನ್ನು ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬರ ಜವಾಬ್ದಾರಿ, ಸಂಘಟನೆಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.