ಬೆಳಗಾವಿ: ಪ್ರವಾಸಕ್ಕೆಂದು ಹೋಗಿದ್ದ ಯುವತಿಯರು ಫಾಲ್ಸ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರೋ ಘಟನೆ ಕಿತವಾಡ ಫಾಲ್ಸ್ನಲ್ಲಿ ನಡೆದಿದೆ.
ಬೆಳಗಾವಿಯ ಉಜ್ವಲ್ ನಗರದ ಆಸಿಯಾ ಮುಜಾವರ್ (17), ಅನಗೋಳದ ಕುದ್ ಶಿಯಾ ಅಸ್ಮಾ ಪಟೇಲ್ (20), ಝಟ್ಪಟ್ ಕಾಲೊನಿಯ ರುಕ್ಕಶಾರ್ ಭಿಸ್ತಿ (20) ಮತ್ತು ತಸ್ಮಿಯಾ (20) ಸಾವನ್ನಪ್ಪಿರುವ ದುರ್ದೈವಿಗಳು.
ಈ ಘಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ
ಡಿಸಿಪಿ, 17 ರಿಂದ 20 ವರ್ಷದ ಒಳಗಿನ ಹೆಣ್ಣು ಮಕ್ಕಳು ಪ್ರವಾಸಕ್ಕೆಂದು ಹೋಗಿದ್ದಾಗ ಘಟನೆ ನಡೆದಿದೆ. ಅವರೆಲ್ಲ ಮುಸ್ಲಿಂ ಹೆಣ್ಣು ಮಕ್ಕಳಾಗಿದ್ದಾರೆ. ಈ ಘಟನೆಯಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ.
ಮೃತದೇಹಗಳನ್ನ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಓರ್ವಳ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಾ ಮಕ್ಕಳ ಪೋಷಕರು ಈ ಕುರಿತು ಗಮನ ಹರಿಸಬೇಕು
ಎಂದಿದ್ದಾರೆ.