ಮಂಗಳೂರು: ಬಸ್ನಲ್ಲಿ ಸಹಪಾಠಿ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸುರತ್ಕಲ್ನ ಮುತ್ತು, ಪ್ರಕಾಶ್ ಮತ್ತು ಅಸೈಗೋಳಿಯ ರಾಕೇಶ್ ಬಂಧಿತರು.
ನ. 24 ರಂದು ಸಂಜೆ ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ನಲ್ಲಿ ರಶೀಮ್ ಉಮರ್, ಹಿಂದೂ ಯುವತಿ ಜೊತೆ ಕುಳಿತುಕೊಂಡು ಪ್ರಯಾಣಿಸುತ್ತಿದ್ದಾಗ ನಂತೂರಿನಲ್ಲಿ ಯುವಕರ ತಂಡ ಬಸ್ನೊಳಗೆ ನುಗ್ಗಿ ಹಲ್ಲೆ ನಡೆಸಿದೆ ಎಂದು ಆರೋಪಿಸಿ ದೂರು ನೀಡಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು.