ಮಂಗಳೂರು: ಸೂಸೈಡ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ನಡೆಯುತ್ತಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಐಸಿಆರ್ ಮಾಡಿದ ಪೋಸ್ಟ್ ನಲ್ಲೇ ಉಗ್ರರು ಈ ಹತ್ಯೆಯ ಸುಳಿವು ನೀಡಿದ್ದಾರೆ. ಇದೇ ಕಾರಣಕ್ಕೆ ಶಾರೀಕ್ ಚಿಕಿತ್ಸೆ ಪಡೆಯುತ್ತಿರೋ ಆಸ್ಪತ್ರೆಗೆ ಪೊಲೀಸರು ಬಿಗಿ ಬಂದೋಬಸ್ತ್ ನೀಡಿದ್ದಾರೆ.
ಕರಾವಳಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆತ್ಮಾಹುತಿ ದಾಳಿಕೋರ ಶಾರೀಕ್ನ ಒಂದೊಂದೇ ಉಗ್ರ ಸತ್ಯಗಳು ಬಯಲಾಗ್ತಿದೆ. ಇದರ ಮಧ್ಯೆ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್ನ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಹ್ಯಾಂಡ್ಲರ್ ಗಳು ಸ್ಲೀಪರ್ ಸೆಲ್ಗಳನ್ನು ಆಕ್ಟೀವ್ ಮಾಡಿಸಿ ದಾಳಿ ನಡೆಸೋ ಸಾಧ್ಯತೆ ಇದೆ. ಶಾರೀಕ್ನೊಂದಿಗೆ ಬ್ಯಾಗ್ ಹಾಕಿಕೊಂಡು ಬಂದವನೂ ನಾಪತ್ತೆ ಆಗಿರೋದ್ರಿಂದ ಆತಂಕ ಹೆಚ್ಚಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೀತಿರೋ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಶಾರೀಕ್ ಕೊಠಡಿ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಸಿದ್ದು, ಉಗ್ರ ಶಾರೀಕ್ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.