ಮಂಗಳೂರು: ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಬಜ್ಪೆ ಪೋಲಿಸ್ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ ನಡೆದಿದೆ.
ಸರಿತಾ (35) ಕೊಲೆಯಾದ ಮಹಿಳೆ.

ಮದ್ಯವ್ಯಸನಿಯಾಗಿದ್ದ ಆಕೆಯ ಪತಿ ದುರ್ಗೇಶ್ ಆರೋಪಿಯಾಗಿದ್ದು, ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.
ನ. 27 ರಂದು ಭಾನುವಾರ ರಾತ್ರಿ ಪತಿ -ಪತ್ನಿ ನಡುವೆ ಜಗಳವಾಗಿದ್ದು, ಈ ವೇಳೆ ಪತ್ನಿ ಸರಿತಾಳ ಮೇಲೆ ದುರ್ಗೇಶ್ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದು, ಇದೆಲ್ಲವನ್ನು ಕಂಡು ದಂಪತಿಯ ಹನ್ನೊಂದು ವರ್ಷದ ಮಗ ಹೆದರಿ ಓಡಿ ಹೋಗಿದ್ದಾನೆ. ಇತ್ತ ತೀವ್ರ ರಕ್ತಸ್ರಾವವಾಗಿ ಸರಿತಾ ಸಾವನ್ನಪ್ಪಿದ್ದಾರೆ.

ಬಜ್ಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.