ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ನಾಗರಾಜ್ ಟಿ.ಡಿ. ರನ್ನು ಕಾರ್ಕಳ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾಗಿ ಹಾಗೂ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಎ. ರನ್ನು ಕರಾವಳಿ ಕಾವಲು ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣಾ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.