ಉಪ್ಪಿನಂಗಡಿ: ಎಟಿಎಂ ನ ಹಣ ಸಾಗಿಸುವ ವಾಹನ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಬಳಿ ನಡೆದಿದೆ.
ಮೃತ ಆಟೋ ಚಾಲಕನನ್ನು ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ (50) ಎಂದು ಗುರುತಿಸಲಾಗಿದೆ.
![](https://zoomintv.online/wp-content/uploads/2022/11/IMG-20221129-WA0066-1024x768.jpg)
ಎಟಿಎಂ ವಾಹನ ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದು, ಆಟೋ ರಿಕ್ಷಾ ಉಪ್ಪಿನಂಗಡಿ ಕಡೆಗೆ ತೆರಳುತ್ತಿತ್ತು. ಘಟನೆಯಲ್ಲಿ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
![](https://zoomintv.online/wp-content/uploads/2022/11/IMG-20221129-WA0065-1024x768.jpg)
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ವಾಸು ಪೂಜಾರಿ ರವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.