ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ವಿಟ್ಲ ಮೇಗಿನಪೇಟೆ ನಿವಾಸಿ ಅಬ್ದುಲ್ ಖಾದರ್ (ಸೌಕತ್) (30) ಬಂಧಿತ ಆರೋಪಿ.

ನ.29 ರಂದು ವಿಟ್ಲ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅಬ್ದುಲ್ ಖಾದರ್ ನಿಷೇದಿತ ಮಾದಕ ದ್ರವ್ಯ ಸೇವನೆ ಮಾಡಿರುವ ಬಗ್ಗೆ ಸಂಶಯದ ಮೇರೆಗೆ ಆತನನ್ನು ವಶಕ್ಕೆ ಪಡೆದಿದ್ದು, ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ದೃಢಪಟ್ಟಿದ್ದು, ವೈದ್ಯಾಧಿಕಾರಿಗಳು ವೈದ್ಯಕೀಯ ದೃಢಪತ್ರ ನೀಡಿದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಎನ್ ಡಿ ಪಿ ಎಸ್ ಆಕ್ಟ್ ನಂತೆ ಪ್ರಕರಣ ದಾಖಲಾಗಿದೆ.