ಬೆಳ್ತಂಗಡಿ: ವ್ಯಕ್ತಿಯೋರ್ವರು ಗುರುವಾಯನಕೆರೆಯಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕೆರೆಯಲ್ಲಿ
ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸ್ಥಳೀಯ ರಿಕ್ಷಾ ಡ್ರೈವರ್ ಒಬ್ಬರ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು,ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳದಲ್ಲಿ ಅಗ್ನಿಶಾಮಕ ದಳ ಬೆಳಾಲು ಹಾಗೂ ವಿಪತ್ತು ನಿರ್ವಹಣಾ ತಂಡದವರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.