ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆಯ ಕೆರೆಗೆ ಹಾರಿ ಆಟೋ ರಿಕ್ಷಾ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಇದೀಗ ಆತನ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಬೆಳ್ತಂಗಡಿಯ ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಎಂದು ಗುರುತಿಸಲಾಗಿದೆ.
ಪ್ರವೀಣ್ ಪಿಂಟೋ ರವರು ಇಂದು ಬೆಳಿಗ್ಗೆ ತನ್ನ ಸ್ನೇಹಿತರಿಗೆ ಕರೆ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಅಲ್ಲದೇ ಕೆರೆಯ ಬದಿಯಲ್ಲಿ ಅವರ ಚಪ್ಪಲಿ ಹಾಗೂ ಆಧಾರ್ ಕಾರ್ಡ್ ಲಭಿಸಿದ್ದು, ಇದರಿಂದಾಗಿ ಅವರೇ ಕೆರೆಗೆ ಹಾರಿರುವುದು ಸ್ಪಷ್ಟಗೊಂಡಿತ್ತು.
ಬೆಳಾಲಿನ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಮತ್ತು ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದ ಸಹಕಾರದೊಂದಿಗೆ ಶೋಧ ಕಾರ್ಯ ನಡೆಸಿದ್ದು, ಮಧ್ಯಾಹ್ನದ ವೇಳೆ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಶವಾಗಾರಕ್ಕೆ ಸಾಗಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ..