ಸುಳ್ಯ: ಅಸೌಖ್ಯದಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿರುವ ಯೋಗೀಶ್ ಎಂಬವರ ಪುತ್ರಿ ಖುಷಿ (8) ಮೃತ ಬಾಲಕಿ.
ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಈಕೆ ಬಳಲುತ್ತಿದ್ದಳು ಎನ್ನಲಾಗಿದೆ. ಅರಂತೋಡು ಸರಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಖುಷಿ ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

























