ಮಡಿಕೇರಿ: ಲಾರಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳು ಸುಮಾರು ಮೂರು ಗಂಟೆಗಳ ಕಾಲ ಹೊತ್ತಿ ಉರಿದಿವೆ. ತಡರಾತ್ರಿ ಮಡಿಕೇರಿ ಬಳಿಕ ಕೆದಕಲ್ ಬಳಿ ಅಪಘಾತ ಸಂಭವಿಸಿದೆ.ಲಾರಿಯಲ್ಲಿ ಟೈಯರ್ ತುಂಬಿದ ಹಿನ್ನೆಲೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಪಡೆದುಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಮೂರು ವಾಹನಗಳೊಂದಿಗೆ ಅಗ್ನಿಶಾಮದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರು.
ಮೂರು ಗಂಟೆಗಳ ಕಾರ್ಯಚರಣೆ ಬಳಿಕ ಅಗ್ನಿಶಮನವಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ವಾಹನಗಳು ಮಾಲೀಕರು ಯಾರು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.