ಪುತ್ತೂರು : ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಆನಡ್ಕ ದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತ ಸಚಿನ್ ಆನಡ್ಕ ಎಂದು ಗುರುತಿಸಲಾಗಿದೆ.
ಈ ಕೃತ್ಯವನ್ನು ರೋಶನ್ ಎಂಬಾತ ಎಸಗಿದ್ದು, ಕೃತ್ಯಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಏ.14 ರ ರಾತ್ರಿ ಈ ಘಟನೆ ಸಂಭವಿಸಿದೆ.
ಸಚಿನ್ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ತೂರಿನ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅಶೋಕ್ ತ್ಯಾಗರಾಜ ನಗರ ರವರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದಿದ್ದಾರೆ.