ಮಂಗಳೂರು : ನಗರದ ಬಲ್ಲಾಳ್‌ಬಾಗ್‌ನಲ್ಲಿರುವ ಹೈಪರ್ ಮಾರ್ಕೆಟ್‌ನಲ್ಲಿ ಏ.14 ರಂದು ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಾತ್ರಿ ಇದ್ದಕ್ಕಿಂದತೆ ಬೆಂಕಿ ಕಾಣಿಸಿಕೊಂಡಿದ್ದು, ಈ ಅವಘಡದಿಂದಾಗಿ ಹೈಪರ್ ಮಾರ್ಕೆಟ್‌ನಲ್ಲಿದ್ದ ಅಪಾರ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ಸುಮಾರು ಒಂದು ಕೋಟಿ ರೂ.ಗೂ ಅಧಿಕ ನಷ್ಟ ಅಂದಾಜಿಸಲಾಗಿದೆ.
ಇನ್ನು ಮಾಹಿತಿ ತಿಳಿದ ತಕ್ಷಣೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಆದರೆ ಏ.15 ರಂದು ಬೆಂಕಿಯ ಕಿಡಿ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ದಳವು ಮತ್ತೊಮ್ಮೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದು ಬಂದಿದೆ.