ವಿಟ್ಲ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವೀರಕಂಭ ಗ್ರಾಮದ ಮಜಿ ಶಾಲಾ ಮುಂಭಾಗ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಪೆರುವಾಯಿ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.
ಘಟನೆಯಿಂದಾಗಿ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ..


























