ಪುತ್ತೂರು: ವಿಧಾನ ಸಭಾ ಚುನಾವಣೆಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಅಕಾಂಕ್ಷಿ ಕೃಪಾ ಅಮರ್ ಆಳ್ವ ರವರು ಡಿ.4 ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ವಿಧಾನ ಸಭಾ ಚುನಾವಣೆಯ ಟಿಕೆಟ್ ಅಕಾಂಕ್ಷಿಯಾಗಿರುವ ಕೃಪಾ ಅಮರ್ ಆಳ್ವ ರವರು ಈಗಾಗಲೇ ಕೆಪಿಸಿಸಿ ಗೆ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎನ್ನಲಾಗುತ್ತಿದೆ.
ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..


























